ಬೆಂಗಳೂರು: ‘ಶಕ್ತಿ’ ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ. ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ ‘X’ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಶಕ್ತಿ’ ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು…
Tag: R.Ashok
ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್ ಆಂಡ್ ರನ್ ಬೇಡ ಎಂದ ವಿಪಕ್ಷ ನಾಯಕ
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು. ಕಾಂಗ್ರೆಸ್ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ…
RSS ಮುಟ್ಟಿದರೆ ಸರ್ವನಾಶ ಆಗ್ತೀರಿ.. ತಾಕತ್ತಿದ್ದರೆ ಮುಟ್ಟಿ ನೋಡಿ.. ಕಾಂಗ್ರೆಸ್ ವಿರುದ್ದ ತೊಡೆ ತಟ್ಟಿದ ಆರ್.ಅಶೋಕ್
ಕಲಬುರಗಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಗೂಂಡಾ ಸಂಸ್ಕೃತಿ ತಲೆ ಎತ್ತುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಬಿಜೆಪಿ ಕಾರ್ಯಕರ್ತನ ಮೇಲೆ ಕಲಬುರಗಿಯಲ್ಲಿ ವಿನಾ ಕಾರಣ ಹಲ್ಲೆ ನಡೆಸಿರುವ ಘಟನೆ ಇದಕ್ಕೆ ಸಾಕ್ಷಿ. ಉಡುಪಿಯಲ್ಲಿ ಇಬ್ಬರು ಭಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 23 ಹಿಂದೂಗಳ ಹತ್ಯೆ ಮಾಡಲಾಯಿತು. ಎಲ್ಲೆಡೆ ಹಿಂದೂಗಳನ್ನು ಗುರಿಯಾಗಿಸಿ ಹಲ್ಲೆ, ಹತ್ಯೆ ಯತ್ನಗಳು ಹೆಚ್ಚುತ್ತಿವೆ. ಇದು ಗೂಂಡಾ ರಾಜ್ಯವಾಗಿ ಪರಿವರ್ತನೆ ಆಗಿದೆ ಎಂದು ದೂರಿದರು. RSS ಸಂಘಟನೆಯನ್ನು ಮುಟ್ಟಿದ್ರೆ ಕಾಂಗ್ರೆಸ್ ಸರ್ವನಾಶ ಆಗುತ್ತೆ ಎಂದು ಅಶೋಕ್ ಎಚ್ಚರಿಕೆ ನೀಡಿದರು. ಸರ್ಕಾರದ ಇಲಾಖೆಗಳು ಬಿಜೆಪಿ ಅವಧಿಯಲ್ಲಿ RSS ಶಾಖೆಗಳಾಗಿದ್ದವು, ಈಗ ಅವುಗಳನ್ನು ಕ್ಲೀನ್ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆ ಬಗ್ಗೆ ಕಿಡಿ ಕಾರಿದ ಅಶೋಕ್, ಧಮ್ಮು ತಾಕತ್ತು ಇದ್ದರೆ…