ಬೆಳಗಾವಿ: ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಬೆನ್ನಲ್ಲೇ ಇದೀಗ ಮತ್ತೊಂದು ಹೋರಾಟಕ್ಕೆ ಬಿಜೆಪಿ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವ ಒಪ್ಪದ ನಾಯಕರ ಗುಂಪು ಈ ಹೋರಾಟ ನಡೆಸಲು ಸಿದ್ಧತೆ ನಡೆಸಿರುವ ಬೆಳವಣಿಗೆ ಕಮಲ ಪಾಳಯದಲ್ಲಿ ಕುತೂಹಲ ಕೆರಳಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ನೇತೃತ್ವದ ಈ ಗುಂಪು ಬಿಜೆಪಿಯ ಅತೃಪ್ತ ನಾಯಕರನ್ನು ಒಗ್ಗೂಡಿಸಿ ಬಳ್ಳಾರಿ ಯಾತ್ರೆಗೆ ಮುಂದಾಗಿದ್ದಾರೆ. ಸೆಪ್ಟೆಂಬರ್ 17ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಬೆಳಗಾವಿಯಲ್ಲಿ ಬಿಜೆಪಿಯ ನಾಯಕರು ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯದ ಖಾಸಗಿ ರೆಸಾರ್ಟ್ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ನಡೆದಿರುವ ಈ ಸಭೆಯಲ್ಲಿ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಪ್ರತಾಪ್ ಸಿಂಹ, ಜಿ.ಎಂ.ಸಿದ್ದೇಶ್ವರ್, ಅಣ್ಣಾಸಾಹೇಬ್ ಜೊಲ್ಲೆ, ಬಿ.ಪಿ.ಹರೀಶ್,…
Tag: Ramesh jarakiholi
ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!
ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಬಳ್ಳಾರಿ ಚಲೋಗೆ ಬಿಜೆಪಿ ತಯಾರಿ ನಡೆಸಿದೆ. ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ತಯಾರಿ ನಡೆಸಿದ್ದು ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಅಕ್ರಮಗಳನ್ನು ಖಂಡಿಸಿ ಸದ್ಯದಲ್ಲೇ ಬಳ್ಳಾರಿಯಲ್ಲಿ ಈ ಬೃಹತ್ ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರು ಈ ಸಂಬಂಧ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿ ಭಾಗದ ಪ್ರಭಾವಿ ನಾಯಕ ಶ್ರೀರಾಮುಲು ಬೆಂಬಲಿಗರು ಕೂಡಾ ಬಳ್ಳಾರಿ ಚಲೋ ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಬಳ್ಳಾರಿ…