ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೊಂದು ಚಾರಿತ್ರಿಕ ಆದೇಶ ಪ್ರಕಟಿಸಿದೆ. ಈ ಮೂಲಕ ಅರ್ಚಕರ ಸಮೂಹದ ಕೋರಿಕೆ ಈಡೇರಿದೆ. ರಾಜ್ಯದ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ/ ಗಂಭೀರವಾಗಿ ಅಸ್ವಸ್ಥರಾದಲ್ಲಿ / ಅಶಕ್ತರಾದಲ್ಲಿ ಅನುವಂಶಿಕ ಹಕ್ಕನ್ನು ವರ್ಗಾಯಿಸುವ ಸರಳ ಕ್ರಮ ಕೈಗೊಳ್ಳಬೇಕೆಂಬ ಬಹುಕಾಲದ ಬೇಡಿಕೆಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಅಸ್ತು ಎಂದಿದ್ದಾರೆ. ಈ ಸಂಬಂಧ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಸಚಿವರ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಕೂಡಾ ಈ ಕುರಿತು ಆದೇಶ ಹೊರಡಿಸಿದ್ದು ಅರ್ಚಕರ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಕಂಇ 31 ಮುಸೇವಿ 2021 ದಿನಾಂಕ 21.08.2021ರಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ,…