ನಾಗ್ಪುರ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಭಕ್ತಿಯ ಹಬ್ಬವಾಗಿ ಆಚರಿಸಲಾಗುತ್ತಿದೆ. RSS ಪಾಳಯದಲ್ಲೂ ಸ್ವಾತಂತ್ರ್ಯೋತ್ಸವ ಸಡಗರ ಕಡುಬಂದಿದೆ. ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯಲ್ಲಿ ನೆರವೇರಿದ ಈ ರಾಷ್ಟ್ರಹಬ್ಬದ ಕೈಂಕರ್ಯವು ನಾಡಿನ ಗಮನೆಳೆಯಿತು. ಸಂಘದ ಶಕ್ತಿಕೇಂದ್ರದಲ್ಲಿನ ಕಾರ್ಯಕ್ರಮಕ್ಕೆ ಸರಸಂಘಚಾಲಕ್ ಡಾ.ಮೋಹನ್ ಭಾಗವತ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು. 78वें स्वतंत्रता दिवस के अवसर पर राष्ट्रीय स्वयंसेवक संघ के पूजनीय सरसंघचालक डॉ. मोहन भागवत जी ने आज संघ कार्यालय, महाल (नागपुर) में ध्वजारोहण किया। pic.twitter.com/aXO2vJU0ke — RSS (@RSSorg) August 15, 2024 ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಧಾನ ಕಚೇರಿ ಆವರಣದಲ್ಲಿ ಸಮಾಗಮವಾದ ಸಂಘದ ವಿವಿಧ ಕ್ಷೇತ್ರಗಳ ಪ್ರಮುಖರು, ಕಾರ್ಯಕರ್ತರು ಈ ವಿಶೇಷ ಸ್ವಾತಂತ್ರ್ಯ ದಿನಾಚರಣೆಯ ಸನ್ನಿವೇಶವನ್ನು ಸಾಕ್ಷೀಕರಿಸಿದರು.