ಕರ್ನಾಟಕ ವೀರಶೈವ ಮಹಾಸಭೆಯ ನೂತನ ಅಧ್ಯಕ್ಷರಾಗಿ ಶಂಕರ್ ಬಿದರಿ ಆಯ್ಕೆ

ಬೆಂಗಳೂರು: ಕರ್ನಾಟಕ ವೀರಶೈವ ಮಹಾಸಭೆಯ ನೂತನ ಅಧ್ಯಕ್ಷರಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ್ ಬಿದರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾಸಭಾ ಅಧ್ಯಕ್ಷ ಚುನಾವಣೆಗೆ ಸ್ಪರ್ಧೆ ಬಯಸಿ ಶಂಕರ್ ಬಿದರಿ ನಾಮಪತ್ರ ಸಲ್ಲಿಸಿದ್ದರು. ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಚಿವ ಈಶ್ವರ ಖಂಡ್ರೆ, ರಾಷ್ಟ್ರೀಯ ಕಾರ್ಯದರ್ಶ ಎಚ್.ಎಂ.ರೇಣುಕಾ ಪ್ರಸನ್ನ, ರಾಜ್ಯ ಪ್ರಧಾನ ಕಾರ್ಯದರ್ಶಿ ನಟರಾಜ ಸಾಗರನಹಳ್ಳಿ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಹಾಸಭಾದ ಚುನಾವಣಾ ಸಂಸ್ಥೆಯು 31,000 ಸದಸ್ಯರನ್ನು ಒಳಗೊಂಡಿದ್ದು, ಪ್ರತಿಸ್ಪರ್ಧಿಗಳು ಇಲ್ಲದಿದ್ದರಿಂದ ಶಂಕರ್ ಬಿದರಿಯವರು ಅವಿರೋಧವಾಗಿ ಆಯ್ಕೆಯಾದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಂಕರ್ ಬಿದರಿಯವರು ಮಾಜಿ ಎಂಎಲ್‌ಸಿ ತಿಪ್ಪಣ್ಣ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ದಕ್ಷ ಪೊಲೀಸ್ ಅಧಿಕಾರಿ ಶ್ರೀಯುತ ಶಂಕರ್ ಬಿದರಿ ಅವರಿಗೆ ಅಭಿನಂದನೆಗಳು. ಈ ನಿಮ್ಮ ಅವಧಿಯಲ್ಲಿ ಸಂಘಟನೆಯು ಬಲಿಷ್ಠವಾಗಲಿ.@ShankarMBidari1 pic.twitter.com/ifd9qu4Uga — Veerashaiva…