ರಾಯಚೂರು: ಸಚಿವ ಸಂಪುಟದ ನಿರ್ಣಯದ ವಿರುದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯುಷನ್)ಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ತಕ್ಷಣವೇ ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ, ಜೀವನೋಪಾಯ, ಕೌಶಲ್ಯಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಒತ್ತಾಯಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ನಡೆದ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸುಪ್ರೀಂಕೋರ್ಟ್‌ನ ತೀರ್ಪಿನ ಪ್ರಕಾರ ಸಚಿವ ಸಂಪುಟದ ತೀರ್ಮಾನವನ್ನು ರಾಜ್ಯಪಾಲರು ಒಪ್ಪಿಕೊಳ್ಳಬೇಕು. ಆದರೆ ಸಂಪುಟದ ತೀರ್ಮಾನವನ್ನು ತಿರಸ್ಕರಿಸಿ ಅನುಮತಿ ನೀಡಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದರು. ರಾಜ್ಯಪಾಲರು ನೀಡಿದ್ದ ಶೋಕಾಸ್ ನೋಟಿಸ್‌ಗೆ ಸರ್ಕಾರ 60 ಪುಟಗಳ ಸಮರ್ಪಕ ಉತ್ತರ ನೀಡಿದೆ. ಇದನ್ನು ಪರಿಶೀಲಿಸದೆ ಕೇವಲ ದೂರದಾರರ ಮನವಿಯನ್ನು…
Tag: Sharan Prakash Patil
UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ.. ಆಯ್ಕೆಯಾದವರಿಗೆ ಮಾಸಿಕ 1,11,000. ರೂಪಾಯಿ ವೇತನ.. ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಇರುವರಿಗೆಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಅರ್ಹರಿಗೆ ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಈ ಹಿಂದೆ ಸ್ಲೋವಾಕಿಯಾದಲ್ಲಿ ಹಲವಾರು ಕನ್ನಡಿಗರಿಗೆ ನಿಗಮದ ಮೂಲಕ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನಲ್ಲೇ ಯುಎಈ ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ಅವರು ಈ ಯೋಜನೆಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. UAE…