ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ ಆರೋಪ

ಹಾವೇರಿ: ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಕ್ಫ್ ವಿವಾದ ಕುರಿತು ಬಿಜೆಪಿ ನಡೆಸಿರುವ ಪ್ರತಿಭಟನೆ ಬಗ್ಗೆ ಹಾವೇರಿ ಜಿಲ್ಲೆ ಶಿಗ್ಗಾವಿ ಬಳಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿಯವರು ಉಪ ಚುನಾವಣೆಗೋಸ್ಕರ ರಾಜಕೀಯ ಮಾಡ್ತಿದ್ದಾರೆ ಎಂದು ಆರೋಪಿಸಿದರು. ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನೋಟಿಸ್ ಕೊಟ್ಟಿದಾರೆ. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಇದ್ದಾಗಲೂ ನೋಟಿಸ್ ಕೊಟ್ಟಿದಾರೆ ಎಂದು ಆರೋಪಿಸಿದರು. ಯಾವ‌ ಕಾರಣಕ್ಕೂ ಕೂಡಾ ರೈತರನ್ನು ಒಕ್ಕಲೆಬ್ಬಿಸಲ್ಲ. ವಕ್ಫ್ ಬೋರ್ಡ್​ನವರು ಯಾವ ಕಾರಣಕ್ಕೂ ಖಾಲಿ ಮಾಡಿಸುವುದಿಲ್ಲ ಎಂದು ಭರವಸೆ ನೀಡಿದ ಸಿಎಂ, ಕಂದಾಯ ದಾಖಲೆಗಳಲ್ಲಿ ಇರುವ ವಕ್ಫ್ ಹೆಸರುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ…

ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್

ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿರುವ ಅರ್ಜಿ ಹಿನ್ನೆಲೆಯಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ನಡುವೆ ರಾಜ್ಯಪಾಲರು ಶೋಕಾಸ್ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ ಎಂದು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸಿಎಂ, ನಾನು 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು. ತಪ್ಪು ಮಾಡಿದ್ದರೆ ತಾನೇ ಹೆದರುವುದು ಎಂದರು. ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ದೂರಿದ ಸಿದ್ದರಾಮಯ್ಯ, ರಾಜಭವನ ಹಾಗೂ…