ಕಲಬುರಗಿ: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ಸಚಿವರು ಈ ವಿಷಯ ತಿಳಿಸಿದ್ದಾರೆ. ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ…
Tag: siddaramaiah
“RGUHS ವಿಸಿ ಪೋಸ್ಟ್ ಬಿಕರಿಯಾಗದಿರಲಿ”, ರಾಜ್ಯ ಸರ್ಕಾರಕ್ಕೆ CRF ಹೀಗೊಂದು ಸಲಹೆ
ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ…
ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ ಆರೋಪ
ಹಾವೇರಿ: ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಕ್ಫ್ ವಿವಾದ ಕುರಿತು ಬಿಜೆಪಿ ನಡೆಸಿರುವ ಪ್ರತಿಭಟನೆ ಬಗ್ಗೆ ಹಾವೇರಿ ಜಿಲ್ಲೆ ಶಿಗ್ಗಾವಿ ಬಳಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿಯವರು ಉಪ ಚುನಾವಣೆಗೋಸ್ಕರ ರಾಜಕೀಯ ಮಾಡ್ತಿದ್ದಾರೆ ಎಂದು ಆರೋಪಿಸಿದರು. ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನೋಟಿಸ್ ಕೊಟ್ಟಿದಾರೆ. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಇದ್ದಾಗಲೂ ನೋಟಿಸ್ ಕೊಟ್ಟಿದಾರೆ ಎಂದು ಆರೋಪಿಸಿದರು. ಯಾವ ಕಾರಣಕ್ಕೂ ಕೂಡಾ ರೈತರನ್ನು ಒಕ್ಕಲೆಬ್ಬಿಸಲ್ಲ. ವಕ್ಫ್ ಬೋರ್ಡ್ನವರು ಯಾವ ಕಾರಣಕ್ಕೂ ಖಾಲಿ ಮಾಡಿಸುವುದಿಲ್ಲ ಎಂದು ಭರವಸೆ ನೀಡಿದ ಸಿಎಂ, ಕಂದಾಯ ದಾಖಲೆಗಳಲ್ಲಿ ಇರುವ ವಕ್ಫ್ ಹೆಸರುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ…
ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿರುವ ಅರ್ಜಿ ಹಿನ್ನೆಲೆಯಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ನಡುವೆ ರಾಜ್ಯಪಾಲರು ಶೋಕಾಸ್ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸಿಎಂ, ನಾನು 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು. ತಪ್ಪು ಮಾಡಿದ್ದರೆ ತಾನೇ ಹೆದರುವುದು ಎಂದರು. ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ದೂರಿದ ಸಿದ್ದರಾಮಯ್ಯ, ರಾಜಭವನ ಹಾಗೂ…