ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗʼವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಜಿತೇಂದ್ರ ಸಿಂಗ್, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು. ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಈ ಸುರಂಗ ಮಾರ್ಗವು ಹಿಮಕುಸಿತ, ಭೂಕುಸಿತದಂತಹ ಎಲ್ಲ ರೀತಿಯ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿಯೂ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.