ರಾಜ್ಯದ ಜನರ ದಾರಿ ತಪ್ಪಿಸಲು ‘ಹುಲಿಯ ಉಗುರು’ ನಾಟಕ? ಸರ್ಕಾರದ ವಿರುದ್ಧ ರವಿ ವಾಗ್ಬಾಣ

ಬೆಂಗಳೂರು: ಇತ್ತೀಚಿಗೆ ನಡೆದ ಐಟಿ ದಾಳಿ, ಅಲ್ಲಿ ಪತ್ತೆಯಾದ ನೂರು ಕೋಟಿಗೂ ಅಧಿಕ ಅಕ್ರಮ ಹಣದ ಕುರಿತಾದ ಚರ್ಚೆಯನ್ನು ದಾರಿತಪ್ಪಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಪೂರ್ಣ ವಿರಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕಮಿಷನ್ ಕಲೆಕ್ಟರ್ (CM) ಮತ್ತು ಡೆಪ್ಯೂಟಿ ಕಮಿಷನ್ ಕಲೆಕ್ಟರ್ (DCM) ಆರಂಭಿಸಿರುವ ಹೊಸ ನಾಟಕ “ಹುಲಿ ಉಗುರು” ಎಂದು ಬಿಜೆಪಿ ನಾಯಕ ಸಿ.ಟಿ.ರವಿ ವಿಶ್ಲೇಷಿಸಿದ್ದಾರೆ. ನೂರಾರು ವರ್ಷಗಳಿಂದ ಹುಲಿಯುಗುರನ್ನು ಬಹಳ ಜನ ರಾಜ್ಯದಾದ್ಯಂತ (ದೇಶದಾದ್ಯಂತ) ಆಭರಣವಾಗಿ ಧರಿಸುತಿದ್ದದ್ದು ಹೊಸದೂ ಅಲ್ಲ, ಅರಣ್ಯ ಇಲಾಖೆಯ ಅಧಿಕಾರಿಗಳು ಕಾಣದೆ ಇದ್ದದ್ದೂ ಅಲ್ಲ. ಈಗ ಸರ್ಕಾರದ ಆಡಳಿತಾತ್ಮಕ ವೈಫಲ್ಯ, ಬೋಗಸ್ ಭರವಸೆಗಳ ಮೇಲಿನ ಜನರ ಆಕ್ರೋಶ, ರೈತರಿಗೆ ವಿದ್ಯುತ್ ಪೂರೈಸಲಾಗದೆ ನೀಡಿದ ಕತ್ತಲೆ ಭಾಗ್ಯ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ನಿಮ್ಮ ಸರಕಾರದ ಮಂತ್ರಿಗಳು ತೆರೆದ ನಕಲಿ ದಾಖಲೆಗಳ ಇಲಾಖೆ, ಶಾಸಕರು ಬಂಡಾಯದ ಬಸ್ ಹತ್ತುತ್ತಿರುವ ಬೇಗುದಿ ಮತ್ತು…