lಕಿದ್ವಾಯಿ ಆಸ್ಪತ್ರೆಯಲ್ಲಿ ಥಲಸ್ಸೇಮಿಯ ಬಾಲಕನಿಗೆ ಮೊದಲ ಬಾರಿ ಅಸ್ಥಿಮಜ್ಜೆ ಚಿಕಿತ್ಸೆ ಯಶಸ್ವಿ

ಬೆಂಗಳೂರು: ನಮ್ಮ ರಾಜ್ಯದ ಹೆಮ್ಮೆಯ ಸರ್ಕಾರಿ ಆಸ್ಪತ್ರೆಯಾದ ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ ಸಂಸ್ಥೆ ಈಗ ದಾಖಲೆ ನಿರ್ಮಿಸಿದೆ. ಅನುವಂಶಿಕ ರಕ್ತ ಕಾಯಿಲೆಗಳಲ್ಲಿ ಒಂದಾಗಿರುವ ಥಲಸ್ಸೆಮಿಯಾಕ್ಕೆ ಮೊದಲ ಬಾರಿಗೆ ಮಕ್ಕಳ ಅಸ್ಥಿಮಜ್ಜೆಯ ಕಸಿಯನ್ನು (ಬೋನ್ ಮ್ಯಾರೋ ಟ್ರಾನ್ಸ್‌ ಪ್ಲಂಟ್‌ –BMT) ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಶ್ಲಾಘನೀಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ಕಿದ್ವಾಯಿ ಸಂಸ್ಥೆಯಲ್ಲಿ ಈ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ ವೈದ್ಯರಿಗೆ ಸಚಿವರು ಸಂಸ್ಥೆಗೆ ಶುಕ್ರವಾರ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ದುರ್ಬಲ ವರ್ಗದ ಜನರಿಗೆ ಅಸ್ಥಿಮಜ್ಜೆ ಕಸಿ ಸೇವೆಗಳು ಸುಲಭವಾಗಿ ಲಭ್ಯವಾಗುವಂತೆ ಮತ್ತು ಕೈಗೆಟುಕುವಂತೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಿದೆ. ಮುಂದಿನ ದಿನಗಳಲ್ಲಿಯೂ ಈ ರೀತಿಯ ವಿಶೇಷ ಯೋಜನೆಗಳನ್ನು ಜಾರಿಗೆ ತರಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು…