ಟಿಬಿ ಜಲಾಶಯದ ಗೇಟಿಗೆ ಹಾನಿ ಹಿನ್ನೆಲೆ; ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ. ತುಂಗಭದ್ರಾ ಜಲಾಶಯದ ಒಂದು ಕ್ರೆಸ್ಟ್ ಗೇಟ್ ಹಾನಿಗೊಳಗಾಗಿದ್ದು ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಹರಿ ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೊಂದೆಡೆ, ಕಾವೇರಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯತ್ತಿದೆ. ಹಾಗಾಗಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ತುಂಗಭದ್ರಾ ಜಲಾಶಯ ಅವಘಡ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ, ಸಚಿವ ಡಿಕೆಶಿ ರಾಜೀನಾಮೆ ನೀಡಲಿ; ಕುರುಬೂರು ಆಗ್ರಹ

ಬಳ್ಳಾರಿ: ತುಂಗಭದ್ರಾ ಗೇಟ್ ಮುರಿದ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ. ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.‌ ತುಂಗಭದ್ರಾ ಜಲಾಶಯ ಗೇಟ್ ಮುರಿದು ನೀರು ಖಾಲಿಯಾಗಿ ರೈತರ ಬದುಕು ಹಾಳಾಗಲು. ಸರ್ಕಾರದ ನಿರ್ಲಕ್ಷತನವೇ ಕಾರಣ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ದೂರಿದ್ದಾರೆ. ಕಳೆದ ಒಂದು ತಿಂಗಳಿಂದ ನಿರಂತರ ಮಳೆ. ಪ್ರವಾಹ ಬರುತ್ತಿದ್ದರೂ ಜಲಾಶಯಗಳ ಸುರಕ್ಷತೆ ಪ್ರವಾಹ ಹಾನಿ ಬಗ್ಗೆ ಗಂಭೀರ ಚಿಂತನೆ ನಡೆಸದೆ ಸರ್ಕಾರ ನಿರ್ಲಕ್ಷ್ಯ ತಾಳಿದೆ. ಇದು ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಬೇಜವಾಬ್ದಾರಿತನ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕದ 4-5 ಜಿಲ್ಲೆಗಳ 22 ಲಕ್ಷ ಎಕ್ಟರ್ ನಲ್ಲಿ ಭತ್ತ ಬೆಳೆಯುತ್ತಿದ್ದ ರೈತರ ಬದುಕು ನಾಶವಾಗಲು ಕಾರಣವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ನೀರಾವರಿ ಸಲಹಾ…