ಬೆಂಗಳೂರು: ವಿಧಾನಸಭೆಯಲ್ಲಿ ಸದನಕ್ಕೆ ಅಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆಯಾದರೂ ಆ ಅಶಿಸ್ತಿಗೆ ಪ್ರಚೋದನೆ ನೀಡಿರುವ ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಗಮನಸೆಳೆದಿದೆ. ಈ ಕುರಿತಂತೆ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್ ಯು.ಟಿ.ಖದರ್ ಅವರಿಗೆ ನೀಡಿದ್ದಾರೆ. ಸಂಸದೀಯ ವಿಶ್ಲೇಷಕರೂ, ವಕೀಲರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು ಅವರು ವಿಧಾನಸಭೆಯ ಅಧಿವೇಶನದಲ್ಲಿ ಶುಕ್ರವಾರ ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ ಸದನವು ಅಂಗೀಕರಿಸಿದ ಪ್ರಸ್ತಾವದ ಲೋಪ ಕುರಿತು ಸ್ಪೀಕರ್ ಅವರ ಗಮನಸೆಳೆದಿದ್ದಾರೆ. ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ 21-03-2025 ರಂದು ಸದನದಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್…