ವಯನಾಡ್ ಸಂತ್ರಸ್ತರಿಗಾಗಿ 1 ಕೋ.ರೂ.ದೇಣಿಗೆ ಸಮರ್ಪಿಸಿದ ಚಿರಂಜೀವಿ, ರಾಮ್‌ಚರಣ್

ಹೈದರಾಬಾದ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ದುರ್ಘಟನೆಯ ಸಂತ್ರಸ್ತರ ನೆರವಿಗೆ ಧಾವಿಸಿರುವ ದಕ್ಷಿಣ ಭಾರತದ ಖ್ಯಾತ ನಟರಾದ ಚಿರಂಜೀವಿ ಹಾಗೂ ರಾಮ್ ಚರಣ್ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ, ಈ ದುರಂತದಲ್ಲಿ 380ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಸಾವಿರಾರು ಮಂದಿ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಸಂತ್ರಸ್ತರ ನೆರವಿಗೆ ಸಿನಿಮಾ ತಾರೆಯರು ಸಹಾಯ ಹಸ್ತ ಚಾಚಿದ್ದಾರೆ. ಇದೇ ವೇಳೆ, ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅವರು ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ

ವಯನಾಡ್ ಭೂಕುಸಿತ; ಸಾವಿನ ಸಂಖ್ಯೆ 275ಕ್ಕೆ ಏರಿಕೆ, ದೇಶವನ್ನೇ ಸೂತಕಕ್ಕೆ ತಳ್ಳಿದ ವಿಕೋಪ

ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 275ಕ್ಕೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ. ಅನೇಕ ಮನೆಗಳು ನೆಲಸಮವಾಗಿದ್ದು, ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. ಭಾನುವಾರದಿಂದೀಚೆಗೆ ನಿರಂತರ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಮೃತದೇಹಗಳು ಪತ್ತೆಯಾಗುತ್ತಲೇ ಇವೆ. ಅಧಿಕಾರಿಗಳ ಪ್ರಕಾರ ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 280 ದಾಟಿದೆ. ನಾರಕ್ಕೂ ಹೆಚ್ಚು‌ ಮಂದಿ‌ ನಾಪತ್ತೆಯಾಗಿದ್ದು ಮೃತದೇಹಗಳಿಗಾಗಿ ಹುಡುಕಾಟ ಸಾಗಿದೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಈ ಭಾರೀ ಭೂಕುಸಿತ ಸಂಭವಿಸಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ಬು ಮುಂದುವರಿಸಿದ್ದಾರೆ.‌