ಚೆನ್ನೈ: ಮಿಚಾಂಗ್ ಚಂಡಮಾರುತದ ರೌದ್ರಾವತಾರದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ಅವಾಂತರ ಸೃಷ್ಟಿಸಿದೆ. ಸೋಮವಾರದಿಂದ ಬಿರುಗಾಳಿ ಮಳೆ ಜೋರಾಗಿದ್ದು ಈ ಎರಡೂ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ತಮಿಳುನಾಡಿನ ಹಲವು ಜಿಲ್ಲೆಗಳು ಮಿಚಾಂಗ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ನಲುಗಿಹೋಗಿದೆ. ಸರಣಿ ಅವಘಡಗಳು ಐರನ್ನು ಬಲಿತೆಗೆದುಕೊಂಡಿವೆ. ಚೆನ್ನೈನಲ್ಲಿ ಐವರು ಸಾವನ್ನಪ್ಪಿದ್ದು ಭೀಕರ ಪರಿಸ್ಥಿತಿ ಹಿನ್ನೆಲೆಯಲ್ಲಿ ತಮಿಳುನಾಡಿನ ಶಾಲಾ-ಕಾಲೇಜುಗಳಿಗೆ ರಜೆ ರಜೆ ಘೋಷಿಸಲಾಗಿದೆ. ಕೋರ್ಟ್-ಕಚೇರಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ ನಗರದ ಬಹುತೇಕ ಪ್ರದೇಶಗಳು ನೀರಿನಿಂದ ಆವೃತವಾಗಿದ್ದು ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿವೆ. ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ಸಾರಿಗೆ ವಾಹನಗಳು ನೀರಿನಲ್ಲೇ ಕೆಟ್ಟು ನಿಂತಿದ್ದು ಜನರು ಪರದಾಡುವಂತಾಗಿದೆ.
Scary 😨
Be Safe 🙏#ChennaiFloods #ChennaiRains2023#ChennaiRain #Chennai #ChennaiFloods2023 https://t.co/4WQiZsp2PW
— Lakhvinder Singh Ramgarhia (@vinder_ds) December 5, 2023
ಈ ನಡುವೆ ಹಲವು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ನೀರುಪಾಲಾಗುತ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ರಕ್ಷಿಸಿವೆ. ಚೆನ್ನೈ ನಗರದ 14 ರೈಲ್ವೇ ಸಬ್‍ವೇಗಳು ಬಂದ್ ಆಗಿವೆ. ರೈಲು-ವಿಮಾನ-ರಸ್ತೆ ಸಂಚಾರ ಅಸ್ತವ್ಯಸ್ತವಾಗಿವೆ. ಚೆನ್ನೈ ಏರ್ ಪೋರ್ಟ್‍ನಲ್ಲಿ ನೀರು ಆವರಿಸಿ ವಿಮಾನಯಾನ ಸ್ತಬ್ಧವಾಗಿದೆ. ವಿದ್ಯುತ್, ನೀರು ಸರಬರಾಜು ವ್ಯವಸ್ಥೆ ಏರುಪೇರಾಗಿದ್ದು ೨೦೧೫ರ ನಂತರದ ಭೀಕರತೆ ಮರುಕಳಿಸಿದ ಅನುಭವವಾಗಿದೆ.