ಮಂಗಳೂರು: ಅನ್ಲಾಕ್ ಪ್ರಕ್ರಿಯೆ ಚುರುಕಾಗುತ್ತಿರುವಂತೆಯೇ ಕಡಲತಡಿಯ ನಗರಿ ಮಂಗಳೂರಿನಲ್ಲಿ ಪ್ರವಾಸೋದ್ಯಮ ಉತ್ತೇಜನ ಕಸರತ್ತು ಬಿರುಸುಗೊಂಡಿದೆ.
ತಣ್ಣೀರುಬಾವಿ ಬೀಚ್ ಅಭಿವೃದ್ಧಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು ಈ ಸಂಬಂಧ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಸ್ಥಳ ಪರಿಶೀಲನೆ ನಡೆಸಿದರು.
dc visit
ಶಾಸಕ ಡಾ.ಭರತ್ ಶೆಟ್ಟಿ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬೀಚ್ ನಲ್ಲಿ ಪ್ರವಾಸಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಸ್ತ್ರತ ಯೋಜನಾ ವರದಿ ತಯಾರಿಸಿ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಕಡಲ ಕಿನಾರೆ ಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಅವರು ಬೀಚ್ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದರು.