ಬೆಂಗಳೂರು: ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಗೆ ಹೊಸ ನಿಯಮ ಜಾರಿಗೆ ಬರಲಿದೆ. ಶಿಕ್ಷಕ ಅಥವಾ ಶಿಕ್ಷಕರ ಪತಿ, ಪತ್ನಿ, ಮಕ್ಕಳ ಪೈಕಿ ಯಾರಾದರೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಅಂತಹವರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ಸಿಗಲಿದೆ. ಈ ಸಂಬಂಧದ ಶಿಕ್ಷಕರ ವರ್ಗಾವಣೆ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ವಿಧೇಯಕವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲು ಈ ವಿಧೇಯಕ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಕರ ವರ್ಗಾವಣೆ ವಿಚಾರದಲ್ಲಿ ಶಿಕ್ಷಣ ಸ್ನೇಹಿ ಕ್ರಮಕ್ಕೆ ಮುಂದಾಗಿರುವ ಸಚಿವ ಸುರೇಶ ಕುಮಾರ್ ಅವರಿಗೆ ವಿವಿಧ ಶಿಕ್ಷಕರ ಸಂಘಟನೆಗಳು ಕೃತಜ್ಞತೆ ಸಲ್ಲಿಸಿವೆ.