ಕೊರೋನಾ ವಕ್ಕರಿಸಿರುವ ಹಿನ್ಬೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಮಾರ್ಚ್ ತಿಂಗಳಾಂತ್ಯದೊಳಗೆ ಪೂರ್ಣಗೊಳ್ಳಬೇಕಿದ್ದ ಶೈಕ್ಷಣಿಕ ಚಟುವಟಿಕೆಗಳೂ ಸ್ಥಗಿತಗೊಂಡಿವೆ. ವಿವಿಧ ತರಗತಿಗಳ ಪರೀಕ್ಷೆಗಳೂ ನಡೆಯದೆ ಮುಂದಿನ ಶೈಕ್ಷಣಿಕ ಕೋರ್ಸ್‌ಗಳ ವಿಚಾರವೂ ಅತಂತ್ರವಾಗಿದೆ.
ಇದೀಗ ಸಿಬಿಎಸ್‌ಇ 10 ಹಾಗೂ 12ನೇ ತರಗತಿಗಳ ಪರೀಕ್ಷೆಗೆ ಮುಹೂರ್ತ ಫಿಕ್ಸ್ ಆಗಿದೆ. ಲಾಕ್‌ಡೌನ್ ಕಾರಣದಿಂದ ಮುಂದೂಡಲಾಗಿದ್ದ ಸಿಬಿಎಸ್‌ಇ 10 ಹಾಗೂ 12ನೇ ತರಗತಿಗಳ ಬಾಕಿ ಇರುವ ಪರೀಕ್ಷೆಗಳನ್ನು ಜುಲೈ 1ರಿಂದ 15ರೊಳಗೆ ನಡೆಸಲಾಗುತ್ತದೆ.
ಈ ಸಂಬಂಧ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಮಾಹಿತಿ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳು ಯಾವಾಗ ಎಂಬ ಚಿಂತೆಯಲ್ಲಿರುವುದರಿಂದ ಜುಲೈನಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ.. ದೇಶವನ್ನೇ ಬೆಚ್ಚಿ ಬೀಳಿಸಿದ ವೀಡಿಯೋ
ಇತ್ತ ರಾಜ್ಯ ಸರ್ಕಾರವೂ ಮುಂದಿನ ಶೈಕ್ಷಣಿಕ ವರ್ಷದ ಪಠ್ಯಕ್ರಮ ಬಗ್ಗೆ ಕುತೂಹಲಕಾರಿ ನಿರ್ಧಾರವನ್ನು ಕೈಗೊಂಡಿದೆ. ಶಾಲೆಗಳು ಆಗಸ್ಟ್ ಅಥವಾ ಸೆಫ್ಟೆಂಬರ್ ನಂತರವೇ ಆರಂಭಗೊಳ್ಳಬಹುದು ಎಂಬ ಮಾತುಗಳು ಹರಿದಾಡುತ್ತಿವೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಆದರೆ ಶೈಕ್ಷಣಿಕ ವರ್ಷ ತಡವಾಗುವ ಸಾಧ್ಯತೆಗಳ ಬಗ್ಗೆ ಲಕ್ಷಣಗಳು ಗೋಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪಠ್ಯಗಳನ್ನು ಕಡಿತ ಮಾಡಲು ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, 1ರಿಂದ ಹತ್ತನೇ ತರಗತಿ ಹಾಗೂ ಪಿಯುಸಿ ಪಠ್ಯಕ್ರಮದಲ್ಲಿ ಹೆಚ್ಚುವರಿ ಎನ್ನುವ ಪಠ್ಯವನ್ನು ಗುರುತಿಸಿ ಅದನ್ನು ಕೈ ಬಿಡುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ.. ಮಡ್ಯಂಗಡಿಗಳು ಮತ್ತೆ ಬಂದ್? ಕಿಕ್’ನಲ್ಲಿರುವ ಎಣ್ಣೆಪ್ರಿಯರಿಗೆ ಶಾಕ್