ಬೆಂಗಳೂರು: ಆರ್ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿರುವ ಭೀಕರ ಕಾಲ್ತುಳಿತ ಘಟನೆ ಬಗ್ಗೆ FIR ದಾಖಲಿಸಿಕೊಳ್ಳಲಾಗಿದೆಯೇ ಎಂಬ ಬಗ್ಗೆ ಪೊಲೀಸರು ಸೂಕ್ತ ಮಾಹಿತಿ ಒದಗಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬುಧವಾರ ಆರ್ಸಿಬಿ ಐಪಿಎಲ್ ವಿಜಯೋತ್ಸವ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಯೋಸಿದೆ. ಈ ದುರ್ಘಟನೆಯಲ್ಲಿ 11 ಮಂದಿ ಮೃತಪತ್ತಿದ್ದು, ಹತ್ತಾರು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಬೆಂಗಳೂರಿನಲ್ಲಿ ಸಂಭವಿಸಿರುವ ಈ ಭೀಕರ ದುರ್ಘಟನೆ ಬಗ್ಗೆ ದೇಶವ್ಯಾಪಿ ಶೋಕ ವ್ಯಕ್ತವಾದರೆ ಕರ್ನಾಟಕ ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದಂತಿಲ್ಲ. ಈ ಘಟನೆಯನ್ನು ಮುಚ್ಚಿಹಾಕಲು ಸರ್ಕಾರ ಮುಂದಾಗುತ್ತಿದೆಯೇ? ಎಂಬ ಅನುಮಾನ ಮೂಡುವಂತಾಗಿದೆ.
ಈ ದುರ್ಘಟನೆಯನ್ನು ಅಸಹಜ ಸಾವು (UDR) ಎಂದು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಭೀಕರ ದುರಂತ ಮರಣಹೋಮವನ್ನೇ ಸೃಷ್ಟಿಸಿದ್ದರೂ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.