ನಾಗಮಂಗಲ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡುತ್ತಾ ನಾಗಮಂಗಲ ಹಿಂಸಾಚಾರ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ನಾಗಮಂಗಲದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ ಸಂಭವಿಸಿದೆ ಎಂದವರು ದೂರಿದರು.

ಗಣೇಶ ಮೂರ್ತಿ ಇದ್ದರೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಲ್ಹಾದ್ ಜೋಶಿ,​ ಸರ್ಕಾರವು ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕಿದೆ ಎಂದು ಒತ್ತಾಯಿಸಿದರು.

Related posts