ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಎಫ್ಐಆರ್ ದಾಖಲಾಗಿದೆ.
50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ರಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.