ಕಾವೇರಿ ವಿವಾದ; ನೀರಿಗಾಗಿ ತಮಿಳುನಾಡು ಮೊರೆ

ದೆಹಲಿ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕ್ಯಾತೆ ತೆಗೆದಿದೆ. ತಮ್ಮ ರಾಜ್ಯಕ್ಕೆ 24,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆಹೋಗಿದೆ.
ಬೆಳೆದು ನಿಂತಿರುವ ಬೆಳೆಗಾಗಿ 24, 000 ಕ್ಯೂಸೆಕ್ಸ್ ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡುವಂತೆ ಕೋರಿದೆ.

ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ಮುಂದಿನ 15 ದಿನಗಳವರೆಗೆ ಪ್ರತಿದಿನ 0.864 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಈ ತಿಂಗಳ 11 ರಂದು ಸೂಚಿಸಿತ್ತು. ಆದರೆ, ಕರ್ನಾಟಕ ಸರ್ಕಾರ ನೀರು ಬಿಟ್ಟಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಗಮನಸೆಳೆದಿದೆ.

Related posts