ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ವೆಂಬಕೊಟ್ಟೈ ಬಳಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ಪಟಾಕಿ ತಯಾರಿಸುವಾಗ ಕಾರ್ಖಾನೆಯ ರಾಸಾಯನಿಕ ಮಿಶ್ರಣ ಕೊಠಡಿಯಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಭಯಾನಕ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ 7 ಮಂದಿ ಸಾವನ್ನಪ್ಪಿದು, ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರೇ ಹೆಚ್ಚುಮಂದಿ ಎಂದು ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದಷ್ಟೇ ಸಮೀಪದ ಕಕ್ಕಿವಾದಂಪಟ್ಟಿ ಎಂಬ ಊರಲ್ಲಿ ಇದೆ ರೀತಿ ಪಟಾಕಿ ಘಟಕದಲ್ಲಿ ದುರಂತ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದರು.

Related posts