ಕೊಚ್ಚಿ: ಕೇರಳದ ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯ (CUSAT) ಸಂಗೀತ ಕಚೇರಿಯಲ್ಲಿ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತಕ್ಕೆ ನಾಲ್ವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಖ್ಯಾತ ಹಿನ್ನಲೆ ಗಾಯಕಿ ನಿಖಿತಾ ಗಾಂಧಿ ಅವರ ಕಾರ್ಯಕ್ರಮವು ವಿಶ್ವವಿದ್ಯಾನಿಲಯದ ವಾರ್ಷಿಕ ಟೆಕ್ ಫೆಸ್ಟ್‌ನ ಕೇಂದ್ರಬಿಂದುವಾಗಿತ್ತು. ಬಯಲು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರೇಕ್ಷಕರು ಜಮಾಯಿಸಿದ್ದರು.
ಅನಿರೀಕ್ಷಿತ ಮಳೆಯಿಂದಾಗಿ ಪ್ರೇಕ್ಷಕರು ತರಾತುರಿಯಲ್ಲಿ ಆಶ್ರಯ ಪಡೆಯಲು ಧಾವಿಸಿದಾಗ ನೂಕುನುಗ್ಗಲು ಉಂಟಾಯಿತು. ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಗಾಯಾಳುಗಳನ್ನು ಕಲಮಸ್ಸೆರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಇತರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#WATCH | Kerala | Bodies of three of the deceased kept at CUSAT for students to pay tribute.
Four students died and several others were injured in a stampede at CUSAT University in Kochi yesterday. The accident took place during a music concert that was held in the open-air… pic.twitter.com/3JcQWy5L9z
— ANI (@ANI) November 26, 2023