ಧಗಧಗಿಸಿ ಹೊತ್ತಿ ಉರಿದ ರೈಲು; ಭೀಕರ ಅವಘಡದಲ್ಲಿ 10 ಮಂದಿ ದುರ್ಮರಣ

ಚೆನ್ನೈ: ತಮಿಳುನಾಡಿನ ಮಧುರೈನಲ್ಲಿ ರೈಲಿಗೆ ಅಗ್ನಿ ಸ್ಪರ್ಶವಾಗಿ ಸಂಭವಿಸಿದ ದುರಂತದಲ್ಲಿ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ. ಮದುರೈ ಜಂಕ್ಷನ್‌ನಲ್ಲಿ ನಿಂತಿದ್ದ ಸ್ಟೇಷನರಿ ಕೋಚ್‌ನಲ್ಲಿ ಶನಿವಾರ ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಯಾರ್ಡ್‌ನಲ್ಲಿ ನಿಂತಿದ್ದ ಟೂರಿಸ್ಟ್ ಕೋಚ್‌ನಲ್ಲಿ ಈ ಅವಘಡ ಸಂಭವಿಸಿದ್ದು 10 ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.

ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಸ್ಥಬೆಂಕಿ ನಂದಿಸಲು ಹರಸಾಹಸ ಪಟ್ಟರು.

https://twitter.com/rohitmehta0/status/1695287034964070405

Uncategorized

Related posts