ಉಡುಪಿಯಲ್ಲೊಂದು ಅನನ್ಯ ‘ನನ್ನ ನಾಡು ನನ್ನ ಹಾಡು’; ನಾಡಿನ ಗಮನಸೆಳೆದ ‘ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್’

ಉಡುಪಿ: ಕಡಲತಡಿಯ ನಗರಿ, ದೇವರ ನಾಡು ಉಡುಪಿಯಲ್ಲಿ ‘ಸಂಗೀತ ಸುಗ್ಗಿ’ಯೊಂದು ನಾಡಿನ ಗಮನಸೆಳೆಯಿತು. ಗಾನ ಸರಸ್ವತಿಯರನ್ನು ಉತ್ತೇಜಿಸುವ, ಸಂಗೀತ ಸಾಮ್ರಾಟರನ್ನು ಗುರುತಿಸಿ ಸನ್ಮಾನಿಸುವ ಅನನ್ಯ ಸಂಗೀತ ವೈಭವ ಕಲಾಜಗತ್ತಿನ ಕುತೂಹಲದ ಕೇಂದ್ರಬಿಂದುವಾಯಿತು. ‘ನನ್ನ ನಾಡು ನನ್ನ ಹಾಡು’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನೆರವೇರಿತು. ಗಾನ ಕೋಗಿಲೆಗಳಿಗಾಗಿಯೇ ಸಂಗೀತ ಸ್ಪರ್ಧೆ ಆಯೋಜಿಸುವ ಮೂಲಕ ಸಂಗೀತಾಸಕ್ತರ ಮೆಚ್ಚುಗೆಗೂ ಈ ಕಾರ್ಯಕ್ರಮ ಪಾತ್ರವಾಯಿತು. .

ಉಡುಪಿ ಜಿಲ್ಲೆಯ ಲಯನ್ಸ್ (317 ಸಿ) ಹಾಗೂ ರೋಟರಿ ಕ್ಲಬ್ (ಜಿಲ್ಲೆ 3182) ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ಸಹಭಾಗಿತ್ವದಲ್ಲಿ ಮಣಿಪಾಲ ‘ಶ್ರೀ ದುರ್ಗಾ ಮ್ಯೂಸಿಕ್ ಮೀಟ್’ ಸಹಯೋಗದೊಂದಿಗೆ ಆಯೋಜಿತವಾದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯಯಲ್ಲೂ ಅನೇಕ ಗಾಯಕರು ಭಾಗಿಯಾಗಿ ಸ್ಪರ್ಧೆಗೆ ಮೆರಗು ನೀಡಿದರು. ಅತ್ಯುತ್ತಮ ಗಾಯಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.


ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಶನಿವಾರ ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮುಖ್ಯಸ್ಥೆ ತೇಜಸ್ವಿನಿ ಅನಿಲ್ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾ ಮಟ್ಟದ ಅಂತಿಮ ಸುತ್ತಿನ ಮುಕ್ತ ವಿಭಾಗದ ಸ್ಪರ್ಧೆಯಲ್ಲಿ ಕುಮಾರಿ ಚೈತನ್ಯ N (ಹೆಬ್ರಿ) ವಿಜೇತರಾಗಿ, ಇವರಿಗೆ ‘ಗಾನ ಸುರಭಿ’ ಬಿರುದು ನೀಡಿ ಸನ್ಮಾನಿಸಲಾಯಿತು , ರೋಟರಿ ವಿಭಾಗದಿಂದ ರೊಟೇರಿಯನ್ ಅಕ್ಷತಾ ವಿನಯ್ (ರೋಟರಿ ಆರ್ ಸಿ ಗಂಗೊಳ್ಳಿ) ವಿಜೇತರಾಗಿ, ‘ಗಾನ ಸಾರಥಿ’ ಬಿರುದು ನೀಡಿ ಸನ್ಮಾನಿಸಲಾಯಿತು. ಲಯನ್ಸ್ ವಿಭಾಗದಿಂದ ಲಯನ್ ಚಿನ್ಮಯಿ ಶೈಣೈ (ಲಯನ್ಸ್ ಕ್ಲಬ್ ಬೆಳ್ಮಣ್ ಸೆಂಚುರಿ), ಇವರು ವಿಜೇತರಾಗಿ ‘ಗಾನ ಸಾಮ್ರಾಟ್’ ಬಿರುದು ಪಡೆದು ಗೌರವಕ್ಕೆ ಪಾತ್ರರಾದರು. ಇದೇ ಸಂದರ್ಭದಲ್ಲಿ ಖ್ಯಾತ ವೈದ್ಯ ಡಾ. ಅಭಯ್ ಟಿ ಕಾಮತ್ ದಂಪತಿಯನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಸಿಎ ದೇವಾನಂದ್, ರೋಟರಿ ಹಾಗೂ ಲಯನ್ಸ್ ಜೊತೆಗೂಡಿ ಪ್ರತಿಭೆಗಳನ್ನು ಅನ್ವೇಷಿಸುವ ಕೆಲಸ ಮಾಡಿದೆ. ಇಂತಹ ಸಂಗೀತ ಕಾರ್ಯಕ್ರಮಗಳ ಮೂಲಕ‌ ಪ್ರತಿಭೆಗಳ ಪರಿಚಯವಾಗುತ್ತದೆ. ಉತ್ತಮ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ, ಅವರನ್ನು ಬೆಳೆಸುವ ಕೆಲಸ ಆಗಬೇಕು ಎಂದರು.

ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್, ರೋಟರಿಯ ಬಿ.ಎಂ. ಭಟ್, ಲಯನ್ಸ್ ಪ್ರಥಮ ಉಪ ಜಿಲ್ಲಾ ಗವರ್ನರ್ ಸ್ವಪ್ನ ಸುರೇಶ್, ದ್ವಿತೀಯ ಉಪ ಜಿಲ್ಲಾ ಗವರ್ನರ್ ರಾಜೀವ ಕೋಟ್ಯಾನ್, ರೋಟರಿಯ ಜಿಲ್ಲಾ ಕಾರ್ಯದರ್ಶಿ ಐರೋಡಿ ರಾಮದೇವ ಕಾರಂತ್, ಲಯನ್ಸ್ ಜಿಲ್ಲಾ ಚೀಫ್ ಕೋರ್ಡಿನೇಟರ್ ಹರಿಪ್ರಸಾದ್ ರೈ, ಸಂಗೀತ ಕಲಾವಿದರ ಸಂಘದ ಅಧ್ಯಕ್ಷೆ ಮುಕ್ತ ಶ್ರೀನಿವಾಸ್ ಭಟ್, ಅಂಬಲಪಾಡಿ ಲಯನ್ಸ್ ಕ್ಲಬ್ ಅಧ್ಯಕ್ಷ ತಾರನಾಥ ಆರ್.ಸುವರ್ಣ, ಅಂಬಲಪಾಡಿ ರೋಟರಿ ಕ್ಲಬ್ ಅಧ್ಯಕ್ಷ ರಾಜು ಪೂಜಾರಿ, ಕಲ್ಯಾಣಪುರ ಲಯನ್ಸ್ ಕ್ಲಬ್ ಅಧ್ಯಕ್ಷ ರೋನಾಲ್ಡ್ ಸ್ವುಹಾರಿಸ್, ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಆರೂರು ಶ್ರೀಧರ ಶೆಟ್ಟಿ, ಸಂತೆಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷ ಜುಲ್ಯಾಸ್ ಲೂವಿಸ್, ಕಲ್ಯಾಣಪುರ ರೋಟರಿ ಕ್ಲಬ್ ಕಾರ್ಯದರ್ಶಿ ಬ್ರೈನ್ ಡಿಸೋಜ , ಉಡುಪಿ ಚೇತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಉಡುಪಿ ಮಿಡ್ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಎಚ್.ಪ್ರಭಾಕರ ಶೆಟ್ಟಿ, ಅನಿಲ್ ರಾಜ್ ಮೊದಲಾದವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಲಯನ್ ನಂದಕಿಶೋರ್ ಕೆಮ್ಮಣ್ಣು, ಅಂಬಲಪಾಡಿ ರೋಟರಿ ಸಂಸ್ಥೆಯ ಕಲ್ಚರಲ್ ಕೋರ್ಡಿನೇಟರ್ ನಾಗಭೂಷಣ್ ಶೇಟ್, ರೋಟರಿಯ ಗಣೇಶ್ ಕುಮಾರ್ ಮಟ್ಟು, ಲಯನ್ ರಜತ್ ಹೆಗ್ಡೆ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts