ಅಂಡರ್ 19 ವಿಶ್ವಕಪ್; ಬಲಿಷ್ಠ ಭಾರತ ತಂಡವನ್ನು ಎದುರಿಸಲಿದೆ ಬಾಂಗ್ಲಾ

ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಈ ತಂಡ ಭಾರತವನ್ನು ಎದುರಿಸಲಿದೆ.

ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನೀಡಿದ 212 ರನ್’ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ಇನ್ನು 35 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ನಗೆ ಬೀರಿತು.

ಈ ಮೂಲಕ ಬಾಂಗ್ಲಾದೇಶ ಮೊದಲ ಬಾರಿಗೆ ಫೈನಲ್ ಪ್ರವೇಸಿಶಿದ್ದು, ಫೆಬ್ರವರಿ 9ರಂದು ಪೊಚೆಫ್‌ಸ್ಟ್ರೂಮ್ ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಬಲಿಷ್ಠ ಭಾರತ ತಂಡವನ್ನು ಎದುರಿಸಲಿದೆ.

Related posts