ಭದ್ರಾ ಮೇಲ್ದಂಡೆ ಯೋಜನೆಗೆ 5,200 ಕೋಟಿ ರೂ.; ಕೇಂದ್ರ ಬಜೆಟ್‌ಗೆ ರಾಜ್ಯದ ಸ್ವಾಗತ

ಬೆಂಗಳೂರು: ಕರ್ನಾಟಕ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5,200 ಕೋಟಿ ರೂಪಾಯಿಗಳ ಅನುದಾನವನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,200 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಿಸಿರುವುದಕ್ಕೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.

ಬರಪೀಡಿತ ಮತ್ತು ಬರ ಸಂಭವನೀಯ ಪ್ರದೇಶದ ರೈತರ ಬಾಳಿನಲ್ಲಿ ಬೆಳಕು ಮೂಡಿಸುವ ಸ್ವತಂತ್ರ ಭಾರತದ ಮೊದಲ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜಯನ್ನಾಗಿ ಘೋಷಣೆ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಜನಪರ ಸರ್ಕಾರದ ನಿಲುವನ್ನು ನಾನು ಅತ್ಯಂತ ಹರ್ಷದಿಂದ ಸ್ವಾಗತಿಸುತ್ತೇನೆ ಎಂದು ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಹಣಕಾಸು ಶ್ರೀಮತಿ ನಿರ್ಮಲಾ ಸೀತಾರಾಮನ್ರವರಿಗೆ ಕೇಂದ್ರ ಜಲ ಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ರವರಿಗೆ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ನಾರಾಯಣಸ್ವಾಮಿ, ಭಗವಂತ ಖೂಬಾ, ರಾಜೀವ್ ಚಂದ್ರಶೇಖರ್ ಹಾಗೂ ಕೇಂದ್ರ ಸಂಪುಟದ ಎಲ್ಲಾ ಸದಸ್ಯರಿಗೆ ಹಾಗೂ ರಾಜ್ಯದ ಎಲ್ಲ ಸಂಸದರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಕೇಂದ್ರದ ಈ ಕ್ರಮದಿಂದ ಕರ್ನಾಟಕದ ಮಹತ್ವದ ನೀರಾವರಿ ಯೋಜನೆ ಹಣಕಾಸಿನ ನೇರವಿನಿಂದ ರೈತರ ಬಾಳನ್ನು ಹಸನುಗೊಳಿಸಲಿದೆ. ಇಂತಹ ಐತಿಹಾಸಿಕ ಕ್ರಮದಿಂದ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರವು ಕರ್ನಾಟಕದ ಜನರ ಭಾವನೆಗಳನ್ನು ಗುರುತಿಸಿ, ಗೌರವಿಸಿ ರೈತರ ಬಾಳಿನಲ್ಲಿ ಗುಣಾತ್ಮಕ ಬದಲಾವಣೆ ತರಲು ಪರಿಣಾಮಕಾರಿಯಾದ ಮಹತ್ವದ ಹೆಜ್ಜೆಯನ್ನು ಇರಿಸಿದೆ ಎಂದವರು ಹೇಳಿದ್ದಾರೆ.

Related posts