ಬೆಂಗಳೂರು: ಪ್ರತಿಬಾರಿಯಂತೆ ಈ ಬಾರಿಯೂ ಕೇಂದ್ರ ಸರ್ಕಾರದ ಬಜೆಟ್ ಕರ್ನಾಟಕದ ಪಾಲಿಗೆ “ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ”ಯಂತಿದೆ ಎಂದು ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
25 ಜನ ಸಂಸದರನ್ನು ಗೆಲ್ಲಿಸಿದ್ದಲ್ಲದೆ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಕ್ಕೆ ಒಕ್ಕೂಟ ಸರ್ಕಾರ ತನ್ನ ಬಜೆಟ್ನಲ್ಲಿ ಹಂಚಿಕೆ ಮಾಡಿದ ಹಣ ಕೇವಲ 3 %.
ಎಂದವರು ವಿಶ್ಲೇಷಿಸಿದ್ದಾರೆ.
ಪ್ರತಿಬಾರಿಯಂತೆ ಈ ಬಾರಿಯೂ ಕೇಂದ್ರ ಸರ್ಕಾರದ ಬಜೆಟ್ ಕರ್ನಾಟಕದ ಪಾಲಿಗೆ “ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ”
25 ಜನ ಸಂಸದರನ್ನು ಗೆಲ್ಲಿಸಿದ್ದಲ್ಲದೆ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಕ್ಕೆ ಒಕ್ಕೂಟ ಸರ್ಕಾರ ತನ್ನ ಬಜೆಟ್ನಲ್ಲಿ ಹಂಚಿಕೆ ಮಾಡಿದ ಹಣ ಕೇವಲ 3 %.
1/3 pic.twitter.com/OkA6Emtg3k— Janata Dal Secular (@JanataDal_S) February 4, 2023
ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಡಬಲ್ ಇಂಜಿನ್ ಸರ್ಕಾರ ಬಂದರೆ ಕೇಂದ್ರದಿಂದ ಅನುದಾನದ ಹೊಳೆಯೇ ಹರಿಯಲಿದೆ ಎಂದು ಬೊಬ್ಬೆ ಹೊಡೆದಿದ್ದ ರಾಜ್ಯದ ಬಿಜೆಪಿ ನಾಯಕರೇ, ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಧ್ವನಿಯೆತ್ತಿ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತರುವ ತಾಕತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಡಬಲ್ ಇಂಜಿನ್ ಸರ್ಕಾರ ಬಂದರೆ ಕೇಂದ್ರದಿಂದ ಅನುದಾನದ ಹೊಳೆಯೇ ಹರಿಯಲಿದೆ ಎಂದು ಬೊಬ್ಬೆ ಹೊಡೆದಿದ್ದ @BJP4Karnataka ನಾಯಕರೇ, ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಧ್ವನಿಯೆತ್ತಿ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತರುವ ತಾಕತ್ತಿದೆಯೇ?
2/3— Janata Dal Secular (@JanataDal_S) February 4, 2023
ಚುನಾವಣಾ ಸಮಯದಲ್ಲಿ ರಾಜ್ಯಕ್ಕೆ ಬಂದು ಮಾತಲ್ಲೇ ಮಂಟಪ ಕಟ್ಟುತ್ತಿದ್ದ ಬಿಜೆಪಿ ರಾಷ್ಟ್ರೀಯ ನಾಯಕರ ಆಟ ಇನ್ನು ಮುಂದೆ ನಡೆಯುವುದಿಲ್ಲ, ಇಷ್ಟು ದಿನ ಬಿಜೆಪಿ ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯಕ್ಕೆ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದವರು ಹೇಳಿದ್ದಾರೆ.
ಚುನಾವಣಾ ಸಮಯದಲ್ಲಿ ರಾಜ್ಯಕ್ಕೆ ಬಂದು ಮಾತಲ್ಲೇ ಮಂಟಪ ಕಟ್ಟುತ್ತಿದ್ದ @BJP4India ನಾಯಕರ ಆಟ ಇನ್ನು ಮುಂದೆ ನಡೆಯುವುದಿಲ್ಲ, ಇಷ್ಟು ದಿನ @BJP4Karnataka ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯಕ್ಕೆ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಉತ್ತರ ನೀಡಲಿದ್ದಾರೆ.
3/3— Janata Dal Secular (@JanataDal_S) February 4, 2023