ಕೊರೋನಾ ಲಸಿಕೆ; ಸರ್ಕಾರಿ ಮಾಹಿತಿ ಮಾತ್ರ ನಂಬಿ

ಬೆಂಗಳೂರು: ಕೊರೋನಾ ಲಸಿಕೆಯಿಂದ ಅಡ್ಡಪರಿಣಾಮ ಉಂಟಾದರೆ, ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಸರ್ಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ಸಂಪೂರ್ಣ ಸುರಕ್ಷಿತ ಎಂದರು.

ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ ಎಂದು ಸಚಿವರು ಸಾರ್ವಜನಿಕರಿಗೆ ಸಲಹೆ ಮಾಡಿದ್ದಾರೆ. ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್ ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಇದೆ ಎಂದೂ ಅವರು ಅಂಕಿ ಅಂಶ ಒದಗಿಸಿದ್ದಾರೆ.

Related posts