ಬೆಂಗಳೂರು: ಕೃಷಿ ಕಾಯ್ದೆ ವಿರುದ್ಧ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದ್ದರೆ, ಇನ್ನೊಂದೆಡೆ ಕೇಂದ್ರ ಸರ್ಕಾರದ ಈ ಕಾಯ್ದೆಗಳನ್ನು ಸಮರ್ಥಿಸಲು ಆಡಳಿತಾರೂಢ ಬಿಜೆಪಿ ಅನೇಕಾನೇಕ ಮಾರ್ಗಗಳನ್ನು ಹುಡುಕಾಡುತ್ತಿದೆ.
ಇದೇ ಸಂದರ್ಭದಲ್ಲಿ, ಈ ಬಾರಿಯ ವಾಜಪೇಯಿ ಜಯಂತಿ ದಿನವನ್ನು ರೈತ ದಿನವನ್ನಾಗಿ ಬಿಜೆಪಿ ಘೋಷಿಸಿದೆ. ದಿವಂಗತ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ನ್ನು ಬಿಜೆಪಿ, ರೈತರ ದಿನವಾಗಿ ಆಚರಿಸಲಿದೆ. ಪ್ರತಿ ಹೋಬಳಿಗಳಲ್ಲಿ ರೈತರ ಸಮಾವೇಶಗಳನ್ನು ಆಯೋಜಿಸಲು ಬಿಜೆಪಿ ನಾಯಕ್ರು ನಿರ್ಧರಿಸಿದ್ದಾರೆ.
ಕೇಂದ್ರ ಸರಕಾರದ ಕೃಷಿ ಸುಧಾರಣಾ ಕಾಯ್ದೆಗಳ ಕುರಿತು ಜನಜಾಗೃತಿ ಮೂಡಿಸಲಾಗುವುದು. ಅದೇದಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು 9 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ 2,000 ರೂಪಾಯಿಯನ್ನು ಬಿಡುಗಡೆ ಮಾಡಿ, ದೇಶದ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.