ವರಮಹಾಲಕ್ಷ್ಮಿ ಹಬ್ಬ; ಎಲ್ಲೆಲ್ಲೂ ಹಬ್ಬದ ಆಚರಣೆಯ ಸೊಬಗು

ಇಂದು ವರಮಹಾಲಕ್ಷ್ಮಿ ಹಬ್ಬ. ಎಲ್ಲೆಲ್ಲೂ ಹಬ್ಬದ ಆಚರಣೆಯ ಸೊಬಗು.. ಎಲ್ಲೆಲ್ಲೂ ಅದೃಷ್ಟ ಲಕ್ಷ್ಮಿಯ ಆರಾಧನೆಯ ಸೊಗಸು.. ಆಸ್ತಿಕ ಬಂಧುಗಳು ಮನೆಗಳಲ್ಲಿ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ವರಮಹಾ ಲಕ್ಷ್ಮಿ ಪೂಜೆಯನ್ನು ಶ್ರದ್ದಾ ಭಕ್ತಿಯಿಂದ ಆಚರಿಸುತ್ತಿದ್ದಾರೆ. ನಾಡಿನ ದೇವಾಲಯಗಳಲ್ಲೂ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದೆ.

ಈ ನಡುವೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಡಿನ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ‘ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸಿ, ಮುನ್ನೆಚ್ಚರಿಕೆ ತೆಗೆದುಕೊಂಡು ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಯಡಿಯೂರಪ್ಪ, ಜನತೆಯಲ್ಲಿ ಮನವಿ ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಕೂಡಾ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

 

Related posts