ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದ್ದು ಸಿದ್ದರಾಮಯ್ಯ ಅವರು ಎಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಗೊಂದಲಗಳಿಗೆ ತೆರೆ ಬಿದ್ದಿದೆ.
ಕಳೆದ ಚುನಾವಣೆಯಲ್ಲಿ ಬಾದಾಮಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳಿಂದ ಸ್ಪರ್ಧಿಸಿಧದ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯಲ್ಲಿ ಸೋಲುಂಡಿದ್ದರು. ಬಾಗಲಕೋಟೆ ಜಿಲ್ಲೆ ಬಾದಾಮಿಯಿಂದ ಗೆದ್ದು ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿದ್ದಾರೆ. ಈ ಬಾರಿ ಅವರು ಕೋಲಾರದಿಂದ ಸ್ಪರ್ದೆ ಮಾಡಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದರೂ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದಿಂದಲೂ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದೂ ಹೇಳಲಾಗುತ್ತಿತ್ತು.
ಇದೀಗ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರಿಗೆ ಟಿಕೆಟ್ ಪ್ರಕಟಿಸಲಾಗಿದೆ. ಆದರೆ ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಪ್ರಕಟಿಸಿಲ್ಲ. ಹಾಗಾಗಿ ವರುಣಾದಲ್ಲಿ ಸಿದ್ದರಾಮಯ್ಯ ಅವರ ಸ್ಪರ್ದೆ ಖಚಿತವಾದರೂ ಕೋಲಾರ ವಿಷಯ ಇನ್ನೂ ಗುಟ್ಟಾಗಿಯೇ ಉಳಿದಿದೆ.