ತೆಲಂಗಾಣದಲ್ಲಿ ಭರ್ಜರಿ ಮತದಾನ; BRS ನಾಯಕಿ ಕವಿತಾ ವಿರುದ್ಧ ನೀತಿ ಸಂಹಿತೆಯ ಉಲ್ಲಂಘನೆ ದೂರು

ಹೈದರಾಬಾದ್: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಅಂತಿಮ ಹಂತದಲ್ಲಿದ್ದು ತೆಲಂಗಾಣದಲ್ಲಿ ಗುರುವಾರ ಭರ್ಜರಿ ಮತದಾನವಾಗಿದೆ. ಇದೇ ವೇಳೆ ರಾಜಕೀಯ ನಾಯಕರಿಂದ ನೀತಿ ಸಂಹಿತೆ ಉಲ್ಲಂಘನೆಯ ಆರೋಪವೂ ಕೇಳಿಬಂದಿದೆ.
ಮತದಾನದ ದಿನದಂದು ‘ಮತ ಕೇಳುವ’ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಬಿಆರ್‌ಎಸ್ ನಾಯಕಿ ಕೆ ಕವಿತಾ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ತೆಲಂಗಾಣ ಕಾಂಗ್ರೆಸ್ ನಾಯಕ ನಿರಂಜನ್ ಅವರು ಗುರುವಾರ ದೂರು ದಾಖಲಿಸಿದ್ದಾರೆ.

ಕವಿತಾ ಅವರು ಗುರುವಾರ ಬಂಜಾರಾ ಹಿಲ್ಸ್‌ನ ಡಿಎವಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಬಿಆರ್‌ಎಸ್‌ಗೆ ಮತ ಹಾಕುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಈ ಮೂಲಕ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ನಿರಂಜನ್ ಅವರು ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ

Related posts