ಬೆಂಗಳೂರು: ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಬಿ.ಕೆ.ರವಿ ಅವರಿಗೆ ವಿ ಪಿ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಮಾಜಿ ಸಚಿವ ಎಚ್.ಆಂಜನೇಯ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಆದಿಜಾಂಬವ ಬೃಹನ್ಮಠದ ಷಡಕ್ಷರ ಮುನಿ ದೇಶೀಕೇಂದ್ರ ಸ್ವಾಮೀಜಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ, ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಡಾ. ಮನೋಹರ್ ಯಾದವ್, ಪ್ರಜಾಪ್ರಗತಿ ಕನ್ನಡ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ,
ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್.ನೀಲಕಂಠ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.