ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಿದರು.
ವಿವಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಮಂದಿ ಸಾಧಕರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಪಡೆದ ಗಣ್ಯರು:
ನ್ಯಾಯಾಂಗ ಕ್ಷೇತ್ರ – ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ,
ಧಾರ್ಮಿಕ ಕ್ಷೇತ್ರ- ಮಹಾದೇವಮ್ಮ,
ಶಿಕ್ಷಣ ಕ್ಷೇತ್ರ- ರಾಮಣ್ಣ ಮಹಾದೇವ ಗಸಿ,
ಸಮಾಜ ಸೇವೆ ಕ್ಷೇತ್ರ- ಜಿ.ಓ.ಮಹಾಂತಪ್ಪ,
ಸಾಮಾಜಿಕ ಸಂಘಟನೆ- ಸೋಮಣ್ಣ,
ವೈದ್ಯಕೀಯ ಕ್ಷೇತ್ರ- ಶಾರದ ಪ್ರಭು ಹುಲಿ ನಾಯಕ,
ಸಾಹಿತ್ಯ ಕ್ಷೇತ್ರ-ಸುಕನ್ಯಾ ಮಾರುತಿ
ರಂಗಭೂಮಿ – ಸುಜಾತಮ್ಮ
ಮುಖ್ಯಮಂತ್ರಿ @siddaramaiah ಅವರು ಇಂದು ವಾಲ್ಮೀಕಿಯವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಣ್ಯರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸಂನಾನಂದಪುರಿ… pic.twitter.com/oHFznkdrfg— CM of Karnataka (@CMofKarnataka) October 28, 2023
ಸಮಾರಂಭದಲ್ಲಿ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು..