ದೆಹಲಿ: ಅಮೆರಿಕಾ ಅಧ್ಯಕ್ಷರ ಭಾರತ ಭೇಟಿ ಏಷ್ಯಾ ರಾಷ್ಟ್ರಗಳಲ್ಲಿ ಕುತೂಹಲವನ್ನು ಹೆಚ್ಚಿಸಿದೆ. ಈ ತಿಂಗಳ 24 ಮತ್ತು 25ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಜನವರಿ ೨೬ ರಂದು ಗಣರಾಜ್ಯೋತ್ಸವ ಸಂದರ್ಭದಲ್ಲೇ ಟ್ರಾಂಪ್ ಅವರು ಭಾರತ ಭೇಟಿ ಕೈಗೊಳ್ಳುವರೆಂಬ ನಿರೀಕ್ಷೆ ಇತ್ತು. ಆದರೆ ಇದೀಗ 24 ಮತ್ತು 25ರಂದು ಟ್ರಾಂಪ್ ದಂಪತಿ ಭಾರತಕ್ಕೆ ಆಗಮಿಸಲಿದ್ದಾರೆ.
ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಡೊನಾಲ್ಡ್ ಟ್ರಂಪ್ ಮತ್ತು ಪತ್ನಿ ಮೆಲಾನಿಯಾ ಟ್ರಂಪ್ ಭಾರತಕ್ಕೆ ತೆರಳುತ್ತಾರೆ ಎಂದು ವೈಟ್ಹೌಸ್ ಟ್ವಿಟ್ಟರ್ ನಲ್ಲಿ ತಿಳಿಸಿದೆ.
ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅವರ ಸ್ವಾಗತಕ್ಕೆ ಮೋದಿ ಸರ್ಕಾರ ಪ್ರಕ್ರಿಯೆಯನ್ನು ಆರಂಭಿಸಿದೆ.
