ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ

ಕೋಲ್ಕತಾ: ಮೋದಿ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಮತ್ತೆ ಹಿಸಾಚಾರಕ್ಕೆ ಕಾರಣವಾಯಿತು. ಉದ್ರಿಕ್ತರು ಎರಡು ರೈಲು ಹಾಗೂ ನಾಲ್ಕು ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ ಕೃಷ್ಣಪುರ ರೈಲ್ವೆ ನಿಲ್ದಾಣ ಹಾಗೂ ಲಾಲ್ ಗೋಲ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ಬೆಂಕಿ ಹಚ್ಚಲಾಗಿದೆ. ಇದೇ ವೇಳೆ, ಕೋನಾ ಎಕ್ಸ್‌ಪ್ರೆಸ್‌ ಹೆದ್ದಾರಿ ಬಳಿ ಪ್ರತಿಭಟನಾ ನಿರತ ಮಂದಿ ನಾಲ್ಕು ಸಾರಿಗೆ ಬಸ್ ಗಳು ಹಾಗೂ ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು ಅಶ್ರುವಾಯು ಸಿಡಿಸಿದರು. .

Related posts