ನವದೆಹಲಿ: ಭಾರತದ ಇತಿಹಾಸದಲ್ಲೇ ಮೋದಿ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಮಹಿಳಾ ಮೀಸಲಾತಿ ಮಸೂದೆ ಮಂಡಿಸಿರುವ ಕೇಂದ್ರ ಸರ್ಕಾರದ ನಡೆ ಬಗ್ಗೆ ಶ್ಲಾಘನೆ ವ್ಯಕ್ತವವಾಗಿದೆ. ಈ ವಿಚಾರದಲ್ಲಿ ಕಾಂಗ್ರ್ರೆಸ್ ಕೂಡಾ ತನ್ನದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದು, ಈ ಮಸೂದೆ ಕಾಂಗ್ರೆಸ್ ಪಕ್ಷದ ಚಿಂತನೆಯಾಗಿದ್ದು, ರಾಜೀವ್ ಗಾಂಧೀ ಸರ್ಕಾರದ ಕಾಲದಿಂದಲೇ ಇದಕ್ಕೆ ಪ್ರಯತ್ನ ನಡೆದಿದೆ ಎಂದು ಕೈ ನಾಯಕರು ಹೇಳಿದ್ದಾರೆ.
ಈ ನಡುವೆ, ಮಂಗಳವಾರ ನೂತನ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದನದ ಮೊದಲ ದಿನದಂದು ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಲಾಗಿದ್ದು. ಇದರ ಜಾರಿಗಾಗಿಯೇ ಭಗವಂತ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಪ್ರಸ್ತುತ ಮಹಿಳಾ ಮೀಸಲಾತಿ ಮಸೂದೆಯನ್ನು ‘ನಾರಿ ಶಕ್ತಿ ವಂದನ್ ಅಧಿನಿಯಂ’ ಎಂದು ಕರೆಯಲಾಗುತ್ತದೆ ಎಂದಿರುವ ಪ್ರಧಾನಿ ಮೋದಿ, ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲೇ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವು ಬಾರಿ ಮಂಡಿಸಲಾಗಿತ್ತು. ಆದರೆ ಆ ಪ್ರಯತ್ನ ಸಫಲವಾಗಿರಲಿಲ್ಲ ಎಂದರು. ಈ ಮಸೂದೆ ಅಂಗೀಕಾರವಾಗಲು ಎಲ್ಲರ ಸಹಕಾರವನ್ನು ಮೋದಿ ಕೋರಿದ್ದಾರೆ.