ಮುಂಬೈ: ಯೆಸ್ ಬ್ಯಾಂಕ್ ಆರ್ಥಿಕ ಬಿಕ್ಕಟ್ಟು ಬಗ್ಗೆ ತನಿಖೆ ಬಿರುಸುಗೊಂಡಿದೆ. ಆರ್ಥಿಕ ಅಪರಾಧ ಹಿನ್ನೆಲೆಯಲ್ಲಿ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಕಾರಣದಿಂದಾಗಿ ಯಸ್ ಬ್ಯಾಂಕ್ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಈ ಖಾಸಗಿ ಬ್ಯಾಂಕ್ ಮೇಲೆ ಹಿಡಿತ ಸಾಧಿಸಿದೆ. ಗ್ರಾಹಕರ ಹಿತ ಕಾಪಾಡುವ ಹಿನ್ನೆಲೆಯಲ್ಲಿ ಉನ್ನತಮಟ್ಟದ ತನಿಖೆಗೂ ಆದೇಶಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ರಾಣಾ ಕಪೂರ್ ಅವರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 11ರವರೆಗೆ ಇಡಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.