ಬೆಂಗಳೂರು: ಎತ್ತಿನ ಹೊಳೆ ಇದೀಗ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ ತೆರಳಲಿದೆ.
ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾ.18 ರಂದು ತಾವು ದೆಹಲಿಗೆ ತೆರಳಿ ಕೇಂದ್ರದ ನಾಯಕರ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ. 508 ಎಕರೆ 1 ಗುಂಟೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಎಲ್ಲಾ ಅಡೆತಡೆಗಳನ್ನು ನಿವಾರಿಸಿ ತುಮಕೂರಿಗೆ ನೀರು ತಂದು, ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.