ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಡಿಸಿ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ.

ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್‌ ಪಕ್ಷವು ತನ್ನ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಪ್ರತಿ ಆಚರಣೆಗಳಿಗೆ ನಿರಂತರ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ, ಪಾಕಿಸ್ಥಾನಕ್ಕೆ ಜಯಕಾರ ಹಾಕುವವರನ್ನು ಬಗಲಲ್ಲಿಟ್ಟುಕೊಳ್ಳುವ ಕಾಂಗ್ರೆಸ್‌ನ ದೃಷ್ಟಿಯಲ್ಲಿ ಭಗವಾಧ್ವಜ ಹಾರಿಸುವುದು ಅಪರಾಧ, ಪಾಕಿಸ್ಥಾನ ಬಾವುಟ ಹಾರಿಸಿದರೆ ಅಪರಾಧವಲ್ಲ ಎಂದು ಬರೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ಈ ಸನಾತನ ಧರ್ಮ ವಿರೋಧಿ ನೀತಿಗೆ ತಕ್ಕ ಪಾಠವನ್ನು ರಾಜ್ಯದ ಜನತೆ ಕಲಿಸಲಿದ್ದಾರೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ… pic.twitter.com/xpSj4XCMaH

— BJP Karnataka (@BJP4Karnataka) January 20, 2026

Related posts