ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಸನ್ನಿವೇಶದ ನಡುವೆ ಭಾರತದಲ್ಲಿ ಗೃಹ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹60 ಹೆಚ್ಚಿಸಲಾಗಿದೆ.

ಈ ಹೆಚ್ಚಳದೊಂದಿಗೆ ದೆಹಲಿಯಲ್ಲಿ (Delhi) ಒಂದು ಸಿಲಿಂಡರ್ ಬೆಲೆ ₹853ರಿಂದ ₹913ಕ್ಕೆ ಏರಿಕೆಯಾಗಿದೆ.

ಇದರ ಜೊತೆಗೆ 19 ಕಿಲೋಗ್ರಾಂ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನೂ ₹115 ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ₹1,883 ಆಗಿದ್ದು, ಮುಂಬೈ (Mumbai)ನಲ್ಲಿ ₹1,835ಕ್ಕೆ ತಲುಪಿದೆ.

ಇದೇ ವೇಳೆ ಇರಾನ್ (Iran)–ಇಸ್ರೇಲ್ (Israel) ನಡುವಿನ ಸಂಘರ್ಷವು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಇದರ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಆದರೆ ಭಾರತದಲ್ಲಿ ಇಂಧನ ಕೊರತೆ ಉಂಟಾಗುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಸೇರಿದಂತೆ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

Related posts