ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಳಗಾವಿ: ರಾಜ್ಯದ ರಾಜಕೀಯವಾಗಿ ಅತಿದೊಡ್ಡ ಜಿಲ್ಲೆ ಎನ್ನಲಾದ ಬೆಳಗಾವಿ ವಿಭಜನೆ ಪ್ರಶ್ನೆ ಮತ್ತೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಚಿಕ್ಕೋಡಿ ಮತ್ತು ಗೋಕಾಕ್ ಎಂಬ ಎರಡು ಹೊಸ ಜಿಲ್ಲೆಗಳ ರಚನೆಗೆ ಒತ್ತಾಯಿಸಿ ನಿಯೋಗವೊಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.

18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಬೆಂಗಳೂರು ಹೊರತಾಗಿಯೇ ರಾಜ್ಯದ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಅವಶ್ಯಕತೆಯ ಕುರಿತ ಬೇಡಿಕೆ ಹಲವು ವರ್ಷಗಳಿಂದಲೇ ಕೇಳಿಬರುತ್ತಿದೆ.

ಬೆಳಗಾವಿ ಚಳಿಗಾಲ ಅಧಿವೇಶನದ ಮೊದಲ ದಿನ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಪ್ರಸ್ತುತ ಜಿಲ್ಲೆಯನ್ನು ಸಣ್ಣ ಬೆಳಗಾವಿ ಜಿಲ್ಲೆಯಾಗಿ ಉಳಿಸಬೇಕು ಹಾಗೂ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಪ್ರತ್ಯೇಕವಾಗಿ ರಚಿಸಬೇಕು ಎಂದು ಮನವಿ ಸಲ್ಲಿಸಿತು.

Related posts