ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ

ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದ್ವೀತಿಯ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ.

ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ವಿವಿಧ ಆಯಾಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದ್ವಿತೀಯ ಸ್ಥಾನದ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ..

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ನೇತೃತ್ವ ಹಾಗೂ ವಿಶೇಷ ಕಾಳಜಿಯಿಂದ ರಾಜ್ಯ ಕೃಷಿ ಇಲಾಖೆ ಮಹತ್ವದ ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರ, ರಾಜ್ಯ ಕೃಷಿ ಇಲಾಖೆಗೆ ದೇಶದಲ್ಲೆ ಬಹು ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ನೀಡಿ ಗೌರವಿಸಿದೆ. ಕಳೆದ ಎರಡುವರೆ ವರ್ಷಗಳಲ್ಲಿ ಸುಮಾರು 44 ಲಕ್ಷ ರೈತರಿಗೆ 5000 ಕೋಟಿ ರೂಪಾಯಿ ಹಣವನ್ಬು ಪಾವತಿಸಿದ್ದು, ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆ ಇತಿಹಾಸ ನಿರ್ಮಿಸಿದೆ..

ಇದೇ ವೇಳೆ ದ್ವೀತಿಯ ಸ್ಥಾನ ಪಡೆದ ರಾಜ್ಯ ಕೃಷಿ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ರಾಜ್ಯದ ಅನ್ನದಾತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ ಇವರು ಪ್ರಶಂಸನ ಪತ್ರವನ್ನು ನೀಡಿರುತ್ತಾರೆ . ಕೃಷಿ ಇಲಾಖೆಯ ಆಯುಕ್ತರು ಹಾಗೂ ಕೃಷಿ ನಿರ್ದೇಶಕರು 18.01.2026ರಂದು ಬೆಂಗಳೂರಿನಲ್ಲಿ ನಡೆದ 13ನೆಯ ರಾಷ್ಟ್ರೀಯ ಸಮ್ಮೇಳನದಂದು ಕಾರ್ಯದರ್ಶಿಗಳು ಸಹಕಾರ ಸಚಿವಾಲಯ ಭಾರತ ಸರ್ಕಾರ ಇವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts