ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್‌, ಕಿಯಾರಾ ಅಡ್ವಾಣಿ ಹಾಗೂ ನಯನತಾರಾ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಟ್ರೈಲರ್‌ ಕೊನೆಗೂ ಬಿಡುಗಡೆಯಾಗಿದೆ. ಶನಿವಾರ ಅದ್ಧೂರಿ ಕಾರ್ಯಕ್ರಮದಲ್ಲಿ ಚಿತ್ರತಂಡ ಟ್ರೈಲರ್‌ ಅನಾವರಣಗೊಳಿಸಿದೆ.

ಈಗಾಗಲೇ ‘ಟಾಕ್ಸಿಕ್’ ಚಿತ್ರದ ಟೀಸರ್‌, ಹಾಡುಗಳು ಹಾಗೂ ಕೆಲ ತುಣುಕುಗಳು ಬಿಡುಗಡೆಯಾಗಿ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿವೆ. ಟೀಸರ್‌ ಮತ್ತು ಹಾಡುಗಳಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಕೆಲವರು ಚಿತ್ರತಂಡದ ಪ್ರಯತ್ನದ ಬಗ್ಗೆ ಟೀಕೆಯನ್ನೂ ವ್ಯಕ್ತಪಡಿಸಿದ್ದರು.

ಇದೀಗ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದ್ದು, ಸಿನಿಮಾ ಕುರಿತ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಹೈ-ವೋಲ್ಟೇಜ್‌ ಆ್ಯಕ್ಷನ್‌, ಅದ್ಧೂರಿ ದೃಶ್ಯಗಳು ಹಾಗೂ ಯಶ್‌ ಅವರ ವಿಭಿನ್ನ ಲುಕ್‌ ಈಗಾಗಲೇ ಅಭಿಮಾನಿಗಳ ಗಮನ ಸೆಳೆದಿದೆ.

ಹೈದರಾಬಾದ್‌ನ ಎಎಂಬಿ ಮಾಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ‘ಟಾಕ್ಸಿಕ್’ ಚಿತ್ರದ ಟ್ರೈಲರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

ರಾಕಿಂಗ್ ಸ್ಟಾರ್ ಯಶ್‌ ಅವರ ‘ಕೆಜಿಎಫ್’ ಸರಣಿಯ ಯಶಸ್ಸಿನ ಬಳಿಕ ‘ಟಾಕ್ಸಿಕ್’ ಚಿತ್ರದ ಮೇಲೆ ದೇಶಾದ್ಯಂತ ಭಾರೀ ನಿರೀಕ್ಷೆ ಮೂಡಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಯಶ್‌ ಅವರೊಂದಿಗೆ ಕಿಯಾರಾ ಅಡ್ವಾಣಿ ಮತ್ತು ನಯನತಾರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Related posts