ರಾಮನಗರ ಬಳಿ ರೆವ್ ಪಾರ್ಟಿ; ಪೋಲೀಸ್ ದಾಳಿ, 115 ಮಂದಿ ವಶಕ್ಕೆ

ರಾಮನಗರ: ವಾರಾಂತ್ಯದಲ್ಲಿ ಆಯೋಜಿತವಾಗಿದ್ದ ರೆವ್ ಪಾರ್ಟಿ ಮೇಲೆ ಪೊಲೀಸರು ಕ್ಷಿಪ್ರ ದಾಳಿ ಮಾಡಿ ಹಲವರನ್ನು ಬಂಧಿಸಿದ್ದಾರೆ.

ರಾಮನಗರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿದಾರು.

ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ರೆಸಾರ್ಟ್‌ನಲ್ಲಿ ರಾತ್ರಿ ರೇವ್ ಪಾರ್ಟಿ ನಡೆಯುತ್ತಿತ್ತು ಎನ್ನಲಾಗಿದೆ. ಪೊಲೀಸರು 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅವರಲ್ಲಿ 35 ಯುವತಿಯರು ಸೇರಿದ್ದಾರೆ. ಎನ್ನಲಾಗಿದೆ.

Related posts