ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ISRO ತನ್ನ 101 ನೇ ಮಿಷನ್ ಆಗಿ ಪಿಎಸ್ಎಲ್ವಿ-ಸಿ61 ಉಡಾವಣೆ ಪ್ರಯತ್ನ ಮಾಡಿದೆ. ಆದರೆ ಈ ಪ್ರಯತ್ನ ವಿಫಲವಾಗಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C61) ರಾಕೆಟ್ ಮೂಲಕ ಇಸ್ರೋ ಭೂ ವೀಕ್ಷಣಾ ಉಪಗ್ರಹ EOS-09 ಅನ್ನು ಬಾಹ್ಯಾಕಾಶಕ್ಕೆ ಉಡಾಯಿಸಿತು. ಇದಾದ ನಂತರ, ಇಸ್ರೋ ಈ ಕಾರ್ಯಾಚರಣೆ ಪೂರ್ಣಗೊಂಡಿಲ್ಲ ಎಂದು ಹೇಳಲಾಗಿದೆ.
ಉಡಾವಣೆಯಾದ ಇಸ್ರೋದ 101 ನೇ ಬಾಹ್ಯಾಕಾಶ ಯಾನವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಫಲವಾಗಿದೆ ಎಂದು ವಿ. ನಾರಾಯಣನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.