ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ.

ಅಪಘಾತ ಸ್ಥಳದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

Related posts